ರೋಮಾಪುರದವರಿಗೆ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖಾಯ್ದೊ ದೆವಾಚ್ಯಾ ರಾಗಾಕ್ ಖಾಲ್ತಿ ಉತ್ರುನ್ ಘೆವ್ನ್ ಯೆತಾ; ಖರೆ ಜೆ ಖಯ್ ಖಾಯ್ದೊಚ್ ನಾ, ಥೈ ಖಾಯ್ದ್ಯಾಚ್ಯಾ ಪರ್‍ಕಾರ್ ಚಲಿನಸಲ್ಲೆ ಮನ್ತಲೆ ನಾ. ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.