Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ, ಪವಿತ್ರಗ್ರಂಥದಲ್ಲಿ ಹೀಗೆ ಹೇಳಿದೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದರ ವಿಷಯದಲ್ಲಿ ಶಾಸ್ತ್ರವು ಹೇಳುವದನ್ನು ಆಲೋಚಿಸಿರಿ. ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಇದು ಅಬ್ರಹಾಮನನ್ನು ನೀತಿವಂತನನ್ನಾಗಿ ಮಾಡಿತು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪವಿತ್ರ್ ಪುಸ್ತಕ್ ಮನ್ತಾ, “ಅಬ್ರಾಹಾಮಾನ್ ದೆವಾ ವರ್‍ತಿ ತೆಕಾ ವಿಶ್ವಾಸ್ ಕರ್‍ಲ್ಯಾನ್, ಅನಿ ದೆವಾಚೆರ್ ತೆಂಕಾ ಹೊತ್ತೆ ವಿಶ್ವಾಸಾಕ್‍ ಲಾಗುನ್ ಖರ್‍ಯಾವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:3
16 ತಿಳಿವುಗಳ ಹೋಲಿಕೆ  

ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.


“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.


ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.


ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.


ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.


ಅವನು ಮಾಡಿದ್ದು ತಲಾತಲಾಂತರಕ್ಕೂ ನೀತಿಯೆಂದು ಎಣಿಸಲ್ಪಟ್ಟಿತು.


ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.


ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.


“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು