ರೋಮಾಪುರದವರಿಗೆ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಹೀಗಿರಲಾಗಿ, ನಾವು ನಂಬಿಕೆಯ ಮೂಲಕ ನೀತಿವಂತರಾಗಿದ್ದೇವೆ. ಆದಕಾರಣ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅತ್ತಾ ಅಮ್ಕಾ ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಠರ್‍ವುನ್ ಹೊಲ್ಲೆ ಹಾಯ್, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಅಮ್ಕಾ ಶಾಂತಿ ರ್‍ಹಾತಾ. ಅಧ್ಯಾಯವನ್ನು ನೋಡಿ |
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.