ರೋಮಾಪುರದವರಿಗೆ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಮಿ ದೆವಾಚಿ ದುಶ್ಮನಾ ಹೊವ್ನ್ ಹೊತ್ತಾಂವ್, ಖರೆ ಅಪ್ನಾಚ್ಯಾ ಲೆಕಾಚ್ಯಾ ಮರ್ನಾನ್ ದೆವಾನ್ ಅಮ್ಕಾ ಅಪ್ನಾಚಿ ದೊಸ್ತಾ ಕರುನ್ ಘೆಟ್ಲ್ಯಾನ್. ಅತ್ತಾ ತೆಚಿ ದೊಸ್ತಾ ಹೊವ್ನ್ ಅಸಲ್ಲೆ ಅಮಿ, ಕ್ರಿಸ್ತಾಚ್ಯಾ ಜಿವಾಚ್ಯಾ ವೈನಾ ಅನಿ ಉಲ್ಲೆ ವಿಶೆಸ್ ರಿತಿಚಿ ಸುಟ್ಕಾ ಖಮ್ವುನ್ ಘೆತಾಂವ್. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.