Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ಹೆಚ್ಚುಕಡಿಮೆ ಉಂಟು. ಹೇಗಂದರೆ ಆ ಒಬ್ಬನ ಅಪರಾಧದಿಂದ ಎಲ್ಲಾ ಮನುಷ್ಯರು ಸತ್ತದ್ದು ನಿಶ್ಚಯವಾಗಿರಲಾಗಿ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಎಲ್ಲಾ ಮನುಷ್ಯರಿಗೆ ಹೇರಳವಾಗಿ ಸಿದ್ಧವಾಗಿರುವದು ಮತ್ತೂ ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ದೇವರ ಉಚಿತ ಕೊಡುಗೆಯು ಆದಾಮನ ಪಾಪದಂತಿಲ್ಲ. ಆ ಒಬ್ಬನು ಮಾಡಿದ ಪಾಪದ ದೆಸೆಯಿಂದಾಗಿ ಅನೇಕ ಜನರು ಸತ್ತರು. ಆದರೆ ಜನರು ದೇವರಿಂದ ಪಡೆದುಕೊಂಡ ಕೃಪೆಯು ಅದಕ್ಕಿಂತ ಬಹು ದೊಡ್ಡದಾಗಿದೆ. ಯೇಸು ಕ್ರಿಸ್ತನೆಂಬ ಒಬ್ಬ ಪುರುಷನ ಕೃಪೆಯ ಮೂಲಕ ದೇವರು ಉಚಿತವಾಗಿ ಕೊಡುವ “ಜೀವ”ವನ್ನು ಅನೇಕ ಜನರು ಹೊಂದಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತೆನಿ ಆದಾಮ್ ಅನಿ ಕ್ರಿಸ್ತ್ ಎಕ್ಲೊಚ್ ನ್ಹಯ್ ಕಶ್ಯಾಕ್‍ ಮಟ್ಲ್ಯಾರ್ ದೆವ್‍ ಅಮ್ಕಾ ದಿತಲಿ ಘುಕೊಟ್ಚಿ ದೆನ್ಗಿ ಆದಾಂವಾಚೊ ಪಾಪ್ ನ್ಹಯ್. ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಲೈ ಲೊಕಾ ಮರ್ಲಿ ಹೆ ಖರೆ ಹಾಯ್. ಖರೆ ದೆವಾಚ್ಯಾ ಕುರ್ಪೆ ವೈನಾ ಲೈ ಲೊಕಾಕ್ನಿ ಹಿ ಕುರ್ಪಾ ಎಕ್ ಫುಕೊಟ್ಚಿ ದೆನ್ಗಿ ಸರ್ಕಿ ದಿವ್ನ್ ಹೊಲಾ, ತೊಚ್ ಜೆಜು ಕ್ರಿಸ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:15
20 ತಿಳಿವುಗಳ ಹೋಲಿಕೆ  

ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.


ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.


ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.


ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.


ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು