Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪಾಪಬಂಧನದಿಂದ ಬಿಡುಗಡೆ ಹೊಂದಿ ದೇವಸಂಬಂಧಕ್ಕೆ ಒಳಗಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದದರಿಂದಲೂ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಪಾಪದಿಂದ ಬಿಡುಗಡೆ ಹೊಂದಿದ್ದೀರಿ. ಈಗ ನೀವು ನೀತಿಗೆ ಗುಲಾಮರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮ್ಕಾ ಪಾಪಾಚ್ಯಾ ಗುಲಾಮ್ ಗಿರಿತ್ನಾ ಸ್ವತಂತ್ರ್ ಕರುನ್ ಹೊಲಾ ಅನಿ ತುಮಿ ಖರ್ಯಾ ಪಾನಾಚ್ಯಾ ವಾಟೆಚಿ ಗುಲಾಮಾ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:18
17 ತಿಳಿವುಗಳ ಹೋಲಿಕೆ  

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.


ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.


ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.


ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.


ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು