Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅತ್ತಾ ತುಮ್ಕಾ ಲಜ್ಜಾ ದಿಸಿ ಸರ್ಕೆ ಕರ್‍ತಲ್ಯಾ ತ್ಯಾ ತುಮಿ ಕರಲ್ಲ್ಯಾ ಕಾಮಾಂಚ್ಯಾ ವೈನಾ ತುಮ್ಕಾ ಕಾಯ್ ಗಾವ್ಲೆ? ತ್ಯಾ ಕಾಮಾಂಚೊ ಪ್ರತಿಪಳ್ ಮರಾನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:21
46 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.


ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.


ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.


ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.


ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.


“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.


ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,


ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.


ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು