Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕ್ರಿಸ್ತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ಟಲ್ಲೆ ಹಾಯ್, ಅನಿ ತೊ ಕನ್ನಾಚ್ ಮರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ಅನಿ ಫಿಡೆ ಮರ್‍ನಾಕ್ ಕನ್ನಾಚ್ ತೆಚೆ ವರ್‍ತಿ ಅದಿಕಾರ್ ಚಾಲ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:9
11 ತಿಳಿವುಗಳ ಹೋಲಿಕೆ  

ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ.


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.


ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು