Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಹೇಳಬಾರದು. ಪಾಪವೇ ಮರಣಕ್ಕೆ ಕಾರಣವಾದದ್ದು; ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು; ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಕಾಣಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ತೆ ಬರೆಚ್ ಮಾಜ್ಯಾ ಮರ್‍ನಾಕ್ ಕಾರನ್ ಹೊಲೆ ಕಾಯ್? ಹೆಚೊ ಅರ್ತ್‍ ತೊ ನ್ಹಯ್! ಹೆ ಸಗ್ಳೆ ಪಾಪಾನ್ ಕರ್‍ಲ್ಯಾನ್; ಬರೆ ಅಸಲ್ಲೆ ವಾಪ್ರುನ್ ಪಾಪಾನ್ ಮರಾನ್ ಹಾನ್ಲ್ಯಾನ್. ಹೆಚ್ಯಾ ವೈನಾ ಪಾಪಾಚೊ ಸ್ವಬಾವ್ ಕಸ್ಲೊ ಮನುನ್ ದಿಸುನ್ ಯೆಲೊ, ಅನಿ ಅಶೆ ಹುಕುಮಾ ವೈನಾ ಪಾಪ್ ಕವ್ಡೊ ವಾಯ್ಟ್ ಮನ್ತಲೆ ಬರೆ ದಿಸುನ್ ಯೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:13
7 ತಿಳಿವುಗಳ ಹೋಲಿಕೆ  

ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.


ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.


ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು