Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪತಿ ಬದುಕಿರುವಾಗಲೇ ಸತಿಯು ಇನ್ನೊಬ್ಬನೊಡನೆ ಸಂಬಂಧ ಬೆಳೆಸಿದರೆ ಆಕೆ ವ್ಯಭಿಚಾರಿಣಿ ಎನಿಸಿಕೊಳ್ಳುತ್ತಾಳೆ. ಪತಿಯು ಸತ್ತುಹೋದರೆ ಆಕೆ ವಿವಾಹಬಂಧನದಿಂದ ಮುಕ್ತಳು. ಅಂಥವಳು ಇನ್ನೊಬ್ಬನನ್ನು ಮದುವೆ ಆದರೂ ವ್ಯಭಿಚಾರಿಣಿ ಎನಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಅವನ ಹಂಗು ತಪ್ಪಿದ್ದರಿಂದ ಆಕೆ ಮತ್ತೊಬ್ಬ ಗಂಡನನ್ನು ಮಾಡಿಕೊಂಡರೂ ವ್ಯಭಿಚಾರಿಣಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ತನ್ನ ಗಂಡನು ಜೀವದಿಂದಿರುವಾಗಲೇ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುತ್ತಾಳೆಂದು ಧರ್ಮಶಾಸ್ತ್ರವು ಹೇಳುತ್ತದೆ. ಆದರೆ ಆಕೆಯ ಗಂಡನು ಸತ್ತುಹೋದರೆ ಆಕೆಯು ವಿವಾಹದ ಹಂಗಿನಿಂದ ಬಿಡುಗಡೆಯಾಗಿದ್ದಾಳೆ. ಹೀಗಿರಲಾಗಿ, ತನ್ನ ಗಂಡನು ತೀರಿಕೊಂಡ ಮೇಲೆ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವಾಗ, ಅವಳ ಪತಿಯು ಜೀವಂತನಾಗಿರುವಾಗ ಆಕೆಯು ಇನ್ನೊಬ್ಬನನ್ನು ಮದುವೆಯಾದರೆ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವಳು. ಆದರೆ ಪತಿಯು ಸತ್ತರೆ, ಆಕೆಯು ಬೇರೊಬ್ಬನನ್ನು ಮದುವೆಯಾದರೂ ಆ ಕಾನೂನಿನಿಂದ ಅವಳು ಬಿಡುಗಡೆ ಆಗಿರಲಾಗಿ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಶೆ ರಾತಾನಾ, ತಿಚೊ ಘೊವ್ ಝಿತ್ತೊ ರ್‍ಹಾತಾನಾಚ್ ತಿ ಅನಿ ಎಕ್ಲ್ಯಾ ಘೊಮನ್ಸಾಚ್ಯಾ ವಾಂಗ್ಡಾ ರ್‍ಹಾಲಿ ತರ್, ತಿಕಾ ಎಕ್ ವ್ಯೆಭಿಚಾರ್ ಕರ್‍ತಲಿ ಮನುನ್ ಬಲ್ವುನ್ ಹೊತಾ; ಖರೆ ತಿಚೊ ಘೊವ್ ಮರ್ಲೊ ತರ್, ತೆನಿ ಅನಿ ಎಕ್ಲ್ಯಾಕ್ ಲಗಿನ್ ಕರುನ್ ಘೆಟ್ಲಿನ್ ತರ್ ತಿ ವ್ಯೆಬಿಚಾರ್ ಕರ್ಲ್ಯಾ ಸರ್ಕೆ ಹೊಯ್ನಾ ಕಶ್ಯಾಕ್ ಮಟ್ಲ್ಯಾರ್ ತೆನಿ ಕರಲ್ಲೆ ಖಾಯ್ದ್ಯಾ ಪರ್‍ಕಾರ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:3
12 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.


“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.


ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು