Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿರಿ. ದೇವರಿಗೆ ಫಲವಾಗುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಸಹೋದರ ಸಹೋದರಿಯರೇ, ಇದೇ ರೀತಿಯಲ್ಲಿ ನಿಮ್ಮ ಹಳೆಯ ಸ್ವಭಾವವು ಸತ್ತುಹೋಯಿತು; ನೀವು ಕ್ರಿಸ್ತನ ದೇಹದ ಮೂಲಕ ಧರ್ಮಶಾಸ್ತ್ರದಿಂದ ಬಿಡುಗಡೆಯಾದಿರಿ. ಈಗ ನೀವು, ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಾತನಿಗೆ ಸೇರಿದವರಾಗಿದ್ದೀರಿ. ನಾವು ದೇವರಿಗೋಸ್ಕರ ಫಲವನ್ನು ಫಲಿಸುವುದಕ್ಕಾಗಿ ಕ್ರಿಸ್ತನಿಗೆ ಸೇರಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜ್ಯಾ ಪ್ರಿತಿಚ್ಯಾನು, ತುಮ್ಚೆಬಿ ತಸೆಚ್, ತುಮಿ ಖಾಯ್ದ್ಯಾಕ್ ಮರ್ಲ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಕ್ರಿಸ್ತಾಚ್ಯಾ ಆಂಗಾಚೊ ಭಾಗ್; ಅನಿ ಅತ್ತಾ ತುಮಿ ಜೆ ಕೊನಾಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ಟಲ್ಲೆ ಹಾಯ್, ತೆನಿ ತೆಕಾ ಸಮಂದ್ ಪಡಲ್ಲೆ ಹೊವ್ನ್ ಹಾಸಿ, ತಸೆಮನುನ್ ಅಮಿ ದೆವಾಚ್ಯಾ ಸೆವೆತ್ ಫಾಯ್ದ್ಯಾಕ್ ಪಡ್ತಲೆ ಹೊವ್ನ್ ರ್‍ಹಾವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:4
35 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.


ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.


ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ.


ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.


ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?


ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.


ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.


ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ ಕುರಿಮರಿಯಾದಾತನಿಗೆ ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು” ಎಂದು ಹೇಳಿ,


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?


ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.


ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.


ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.


ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.


ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು