Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾವು ರಕ್ಷಣೆಯನ್ನು ಹೊಂದಿದವರಾದರೂ ಇನ್ನು ಎದುರುನೋಡುವವರಾಗಿದ್ದೇವೆ. ಎದುರುನೋಡುವ ಪದವಿ ಪ್ರತ್ಯಕ್ಷವಾಗಿದ್ದರೆ ಎದುರುನೋಡುವದೇಕೆ? ಪ್ರತ್ಯಕ್ಷವಾದದ್ದನ್ನು ಎದುರುನೋಡುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಶ್ಯಾಕ್ ಮಟ್ಲ್ಯಾರ್ ಹ್ಯಾ ಬರೊಸ್ಯಾಚ್ಯಾ ವೈನಾಚ್ ಅಮ್ಕಾ ಸುಟ್ಕಾ ಗಾವ್ತಾ; ಖರೆ ಅಮಿ ಬರೊಸೊ ಥವ್ನ್ ಹೊತ್ತೆ ಅಮ್ಚ್ಯಾ ಡೊಳ್ಯಾಕ್ನಿ ದಿಸುಕ್ ಲಾಗ್ಲಾ ಹೊಲ್ಯಾರ್ ತೊ ಬರೊಸೊ ನ್ಹಯ್ ಕಶ್ಯಾಕ್ ಮಟ್ಲ್ಯಾರ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:24
29 ತಿಳಿವುಗಳ ಹೋಲಿಕೆ  

ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ.


ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ.


ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.


ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


“ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.


ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು