Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಪ್ನಾಚೊ ಪ್ರೆಮ್ ಕರ್‍ತಲ್ಯಾಕ್ನಿ ಮಟ್ಲ್ಯಾರ್, ಜೆ ಕೊನಾಕ್ ಅಪ್ನಾಚ್ಯಾ ಉದ್ದೆಸಾ ಸಾಟ್ನಿ ಬಲ್ವುಲ್ಯಾನಾಯ್ ತೆಂಕಾ ದೆವ್ ಸಗ್ಳೆ ಬರೆಚ್ ಕರ್‍ತಾ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:28
53 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”


ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.


ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,


ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.


ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.


ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.


ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.


ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.


ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.


ಈ ಮನವೊಲಿಕೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ.


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,


ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.


ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು