ರೋಮಾಪುರದವರಿಗೆ 8:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಅಶೆ ಜೆ ಕೊನಾಕ್ ತೆನಿ ಯೆಗಳ್ಯಾನಾಯ್ ತೆಂಕಾ ತೆನಿ ಬಲ್ವುಲ್ಯಾನಾಯ್, ಅನಿ ಜೆ ಕೊನಾಕ್ ತೆನಿ ಬಲ್ವುಲ್ಯಾನಾಯ್ ತೆಂಕಾ ತೊ ನಿತಿವಂತ್ ಮನುನ್ ಎಚುನ್ ಕಾಡುನ್ ಘೆತಾ, ಅನಿ ತೆನಿ ಅಪ್ನಾಚಿ ಮಹಿಮಾ ತೆಂಚ್ಯಾ ವಾಂಗ್ಡಾ ವಾಟುನ್ ಘೆಟ್ಲ್ಯಾನಾಯ್. ಅಧ್ಯಾಯವನ್ನು ನೋಡಿ |