Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಅಶೆ ಹೊಲ್ಯಾರ್ ತೆನಿ ಚುಕಿದಾರ್ ಮನುನ್ ಸಾಂಗ್ತಲೊ ಕೊನ್ ತೊ? ಕ್ರಿಸ್ತ್ ಜೆಜು ಮರ್‍ಲೊ, ತೊ ಝಿತ್ತೊ ಹೊಲಾ, ಅನಿ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ಲಾ ಅನಿ ಅಮ್ಚ್ಯಾಸಾಟ್ನಿ ದೆವಾಕ್ಡೆ ಮಾಗುಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:34
37 ತಿಳಿವುಗಳ ಹೋಲಿಕೆ  

ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.


ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”


ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.


ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು