Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ನಾ, ಹ್ಯಾ ಸಗ್ಳ್ಯಾ ವಿಶಯಾತ್ನಿ ಅಮಿ ಅಮ್ಚೊ ಪ್ರೆಮ್ ಕರಲ್ಲ್ಯಾಚ್ಯಾ ವೈನಾ ಪುರಾ ರಿತಿನ್ ಜಿಕುನ್ ಜಯ್ ಹೊತಾಂವ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:37
25 ತಿಳಿವುಗಳ ಹೋಲಿಕೆ  

ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.


ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು