Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಾನುಸ್ಪಾನಾಚ್ಯಾ ಸ್ವಬಾವಾಚ್ಯಾ ಆಶೆ ಸರ್ಕೆ ಚಲ್ತಲ್ಯಾಚೊ ಫಳ್ ಮರಾನ್, ಪವಿತ್ರ್ ಆತ್ಮ್ಯಾಚ್ಯಾ ಅಶೆಚೆ ಪರ್‍ಕಾರ್ ಚಲ್ತಲ್ಯಾಕ್ ಜಿವ್ ಅನಿ ಶಾಂತಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:6
17 ತಿಳಿವುಗಳ ಹೋಲಿಕೆ  

ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.


ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು