ರೋಮಾಪುರದವರಿಗೆ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911-12 ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11-12 ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11-12 ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11-12 ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತಸೆ ರ್‍ಹಾಲ್ಯಾರ್‍ಬಿ ತಿ ಪೊರಾ ಜಲ್ಮುಚ್ಯಾ ಅದ್ದಿಚ್ ತೆನಿ ಬರೆ ಹೊಂವ್ದಿ, ವಾಯ್ಟ್ ಹೊಂವ್ದಿ ಕರುಚ್ಯಾ ಫಿಡೆಚ್, ದೆವಾನ್ ಥೊರ್ಲೊ ಧಾಕ್ಲ್ಯಾಚಿ ಚಾಕ್ರಿ ಕರ್‍ತಾ, ಮನುನ್ ಅಧ್ಯಾಯವನ್ನು ನೋಡಿ |