Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ, ಯೆ ಮಾನ್ಸಾ, ದೆವಾಕ್ ಹುರ್‍ಪಾಟಿ ಬೊಲುಕ್ ತಿಯಾ ಕೊನ್? ಎಕ್ ಮಾಟಿಚ್ಯಾ ಗಾಡ್ಗ್ಯಾನ್ ತೆಕಾ ಕರಲ್ಲ್ಯಾ ಮಾನ್ಸಾಕ್, “ತಿಯಾ ಮಾಕಾ ಅಶೆ ಕಶ್ಯಾಕ್ ಕರ್‍ಲೆ” ಮನುನ್ ಇಚಾರುಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:20
30 ತಿಳಿವುಗಳ ಹೋಲಿಕೆ  

ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ನೀವಾಡುವ ಒಣಮಾತುಗಳಿಗೆ ಇತಿಮಿತಿ ಇಲ್ಲವೇ? ಇಂತಹ ಮಾತನಾಡಲು ಒತ್ತಾಯಪಡಿಸಿದ್ದೇನೆಯೇ?


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?


ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?


ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?


ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?


ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,


ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು.


ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.


ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


“ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,


ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?


ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.


ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು