Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾಜಿ ಸ್ವತಾಚಿ ಲೊಕಾ, ಮಾಜೆಚ್ ಮಾಸ್ ಅನಿ ರಗಾತ್ ಹೊವ್ನ್ ಹಾತ್ ಹಿ ಲೊಕಾ! ತೆಂಚ್ಯಾಸಾಟ್ನಿ ಮಿಯಾ ಕ್ರಿಸ್ತಾಕ್ನಾ ಮಾಕಾ ಧುರ್ ಕರುನ್ ಘೆವ್ಕ್ ಅನಿ ದೆವಾಚೊ ಸರಾಪ್ ಮಾಜೆ ವರ್‍ತಿ ಘಾಲುನ್ ಘೆವ್ಕ್ ಸೈತ್ ತಯಾರ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:3
27 ತಿಳಿವುಗಳ ಹೋಲಿಕೆ  

ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.


ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.


ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.


ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.


ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.


ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.


ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.


ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.


ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.


ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.


ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.


ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.


ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ


ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?


ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.


ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು