Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದಕ್ಕೆ ಕಾರಣವಾದರೂ ಏನು? ಅವರು ಸತ್ಕಾರ್ಯಗಳನ್ನು ಆಧಾರವಾಗಿಟ್ಟುಕೊಂಡರೇ ಹೊರತು ವಿಶ್ವಾಸವನ್ನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಬೇಕೆಂದು ಪ್ರಯತ್ನಿಸಿದರೂ ಆ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಇಸ್ರೇಲಿನ ಜನರಾದರೋ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಪ್ರಯತ್ನಿಸಿ ವಿಫಲರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ದೆವಾಚಿ ಲೊಕಾ ಅಪ್ನಾಕ್ ಖರ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಕರುನ್ ಘೆವ್‍ಸಾಟ್ನಿ ಎಕ್ ಖಾಯ್ದೊ ಹುಡ್ಕುಕ್ ಲಾಗಲ್ಲಿ. ಖರೆ ತೆಂಕಾ ತೆ ಗಾವುಕ್‍ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:31
13 ತಿಳಿವುಗಳ ಹೋಲಿಕೆ  

ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.


ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು