1-2 ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.
ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.