Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಜಕರೀಯನು ಆ ದೂತನಿಗೆ - ಇದನ್ನು ನಾನು ಯಾತರಿಂದ ತಿಳುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ದಿನಹೋದವಳು ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಕರಿಯಾನ್ ದೆವಾಚ್ಯಾ ದುತಾಕ್ “ಹೆ ಸಗ್ಳೆ ಹೊತಲೆ ಖರೆ ಮನುನ್ ಮಿಯಾ ಕಶೆ ವಿಶ್ವಾಸ್ ಕರು? ಮಿಯಾ ಎಕ್ ಮ್ಹಾತಾರೊ ಮಾನುಸ್,ಅನಿ ಮಾಜಿ ಬಾಯ್ಕೊಬಿ ಮ್ಹಾತಾರಿ”, ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:18
10 ತಿಳಿವುಗಳ ಹೋಲಿಕೆ  

ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.


ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


“ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.


ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.


ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.


ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.


ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು