Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಾರಂಭದಿಂದಲೂ ಆ ಸಂಗತಿಗಳನ್ನು ಕಣ್ಣಾರೆ ಕಂಡು ದೇವರ ಸಂದೇಶವನ್ನು ಸಾರಿದವರಿಂದ ನಾವು ಕೇಳಿದ ಸಂಗತಿಗಳನ್ನೇ ಅವರು ಬರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹೆ ಸುರು ಹೊಲ್ಲ್ಯಾಕ್ನಾ ಡೊಳ್ಯಾನ್‍ ಡೊಳೊಬರ್ ಬಗಟಲ್ಲ್ಯಾನಿ ಅನಿ ಅಮ್ಕಾ ಬರಿ ಖಬರ್ ಸಾಂಗಲ್ಲ್ಯಾನಿ ಸಾಂಗಲ್ಲ್ಯಾ ಸರ್ಕೆಚ್ ತೆನಿ ಲಿವ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:2
25 ತಿಳಿವುಗಳ ಹೋಲಿಕೆ  

ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.


ನಮ್ಮ ಕರ್ತನಾದ ಯೇಸುಕ್ರಿಸ್ತನ ಶಕ್ತಿಯನ್ನೂ, ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕಥೆಗಳನ್ನು ನಾವು ಅನುಸರಿಸಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ಅದನ್ನು ತಿಳಿಯಪಡಿಸಿದೆವು.


ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.


ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.


ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,


ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.


ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.


ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು