Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಕರ್ತನು ಈ ವಯಸ್ಸಿನಲ್ಲಿ ನನ್ನನ್ನು ಕಟಾಕ್ಷಿಸಿ, ನನಗೆ ಈ ರೀತಿಯಾಗಿ ಮಾಡಿ, ಜನರ ಮಧ್ಯದಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕರ್ತನು ಈ ಕಾಲದಲ್ಲಿ ನನ್ನನ್ನು ಪರಾಮರಿಸಿ ನನಗೆ ಈ ರೀತಿಯಾಗಿ ಮಾಡಿ ಜನರಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ ಅನ್ನುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎಲಿಜಬೇತಳು, “ನೋಡಿ, ಪ್ರಭುವು ನನಗೋಸ್ಕರ ಎಂಥಾ ಕಾರ್ಯಮಾಡಿದ್ದಾನೆ! ನನ್ನ ಜನರ ನಡುವೆ ನನಗಿದ್ದ ಅವಮಾನವನ್ನು ಪ್ರಭುವು ತೊಲಗಿಸಿದ್ದಾನೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವಳು, “ಜನರಲ್ಲಿ ನನಗಿದ್ದ ಅವಮಾನವನ್ನು ತೆಗೆದುಹಾಕುವುದಕ್ಕಾಗಿ ಕರ್ತದೇವರು ನನ್ನ ಮೇಲೆ ದಯೆತೋರಿಸಿ ಈ ದಿನಗಳಲ್ಲಿ ನನಗೆ ಹೀಗೆ ಮಾಡಿದ್ದಾರೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಎಲಿಜಾಬೆತಾನ್,“ಆಕ್ರಿಕ್ ಅತ್ತಾತರ್ ದೆವಾನ್ ಮಾಜೆಸಾಟಿ ಕವ್ಡೆ ಮೊಟೆ ಕಾಮ್ ಕರ್‍ಲ್ಯಾನ್, ಲೊಕಾಂಚ್ಯಾ ಇದ್ರಾಕ್ ಹೊತ್ತೆ ಮಾಜೆ ಮಾಲ್ದಿಸಾವ್ ಕಾಡುನ್ ಟಾಕ್ಲ್ಯಾನ್” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:25
14 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.


ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು.


ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವ ವರೆಗೂ ಮಕ್ಕಳೇ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು