Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಆಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಉಚಿತವೆಂದು ನನಗೂ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ,ಸುರು ಹೊಲ್ಲ್ಯಾಕ್ನಾ ಮಿಯಾಬಿ ಬರೆ ಕರುನ್ ಹೆ ಶಿಕ್ಲೊ ಅನಿ ತುಜ್ಯಾಸಾಟಿ ಎಕಾಚ್ಯಾ ಫಾಟ್ನಾ ಎಕ್ ವಿಶಯ್ ಬರೆ ಕರುನ್ ಪುಸ್ತಕ್ ರುಪಾತ್ ಲಿವ್ನ್ ಥವ್ತಲೆ ಬರೆ,ಮನುನ್ ಮಾಕಾ ದಿಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:3
17 ತಿಳಿವುಗಳ ಹೋಲಿಕೆ  

ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,


ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.


ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.


“ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.


ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ,


“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.


ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.


ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.


ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,


ಸನ್ಮಾನ್ಯನಾದ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳನ್ನು ಕ್ರಮವಾಗಿ ಬರೆಯುವುದಕ್ಕೆ ಅನೇಕರು ಪ್ರಯತ್ನಿಸಿದ್ದಾರೆ.


ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.


ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು