Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ದೂತನು ಆಕೆಗೆ - ಮರಿಯಳೇ, ಹೆದರಬೇಡ; ನಿನಗೆ ದೇವರ ದಯೆ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೇವದೂತನು ಆಕೆಗೆ, “ಮರಿಯಳೇ, ಭಯಪಡಬೇಡ. ದೇವರು ನಿನ್ನನ್ನು ಬಹಳವಾಗಿ ಆಶೀರ್ವದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ದೆವಾಚ್ಯಾ ದುತಾನ್ ತಿಕಾ, “ಮರಿ ಭಿಂವ್‍ನಕೊ; ದೆವಾಚಿ ಮೊಟಿ ಕುರ್ಪಾ ತುಜೆ ವರ್‍ತಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:30
13 ತಿಳಿವುಗಳ ಹೋಲಿಕೆ  

ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;


ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.


ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.


ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು