Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ವಯೋವೃದ್ಧರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ದಿನಹೋದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರಿಗೆ ಮಕ್ಕಳಿರಲಿಲ್ಲ. ಎಲಿಜಬೇತಳು ಬಂಜೆಯಾಗಿದ್ದಳು; ಮತ್ತು ಅವರಿಬ್ಬರೂ ಬಹಳ ಮುಪ್ಪಿನವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ತೆಂಕಾ ಪೊರಾ ನತ್ತಿ. ಕಶ್ಯಾಕ್ ಮಟ್ಲ್ಯಾರ್ ಎಲಿಜಾಬೆತ್ ವಾಂಜ್ಡಿ ಹೊತ್ತಿ. ಎಲಿಜಾಬೆತ್ ಅನಿ ಜೆಕರಿಯಾ ಲೈ ಮ್ಹಾತಾರೆ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:7
16 ತಿಳಿವುಗಳ ಹೋಲಿಕೆ  

ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.


ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.


ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.


ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.


ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.


ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.


ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.


ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ಯಾಜಕೀಯ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳಾಗಿದ್ದಳು. ಆಕೆಯ ಹೆಸರು ಎಲಿಸಬೇತ್.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು