Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:74 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

74-75 ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

74 ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

74-75 ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲ ಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

74-75 ಏಕೆಂದರೆ ನಮ್ಮ ಜೀವಮಾನವೆಲ್ಲಾ ನಾವು ಆತನ ಸನ್ನಿಧಿಯಲ್ಲಿ ನೀತಿವಂತರೂ ಪರಿಶುದ್ಧರೂ ಆಗಿದ್ದು ಭಯವಿಲ್ಲದೆ ಆತನ ಸೇವೆ ಮಾಡಬೇಕೆಂಬುದೇ ಆತನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

74 ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

74 ತೆನಿ ಅಮ್ಕಾ ಅಮ್ಚ್ಯಾ ದುಸ್ಮಾನಾಂಚ್ಯಾ ಹಾತಾತ್ನಾ ಸೊಡ್ಸುತಾ ಮನುನ್ ಗೊಸ್ಟ್ ದಿಲ್ಲ್ಯಾನ್, ಅನಿ ಕಾಯ್ಬಿ ಭಿಂಯೆನಸ್ತಾನಾ ಅಪ್ನಾಚಿ ಸೆವಾ ಕರಿ ಸರ್ಕೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:74
21 ತಿಳಿವುಗಳ ಹೋಲಿಕೆ  

ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.


ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು, ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”


ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು