Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವದು ಯಾಜಕರ ಮರ್ಯಾದೆಯ ಪ್ರಕಾರ ಅವನ ಪಾಲಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಯಾಜಕಾಂಚ್ಯಾ ಪದ್ದತಿ ಸರ್ಕೆ ದೆವಾಚ್ಯಾ ಗುಡಿತ್ ಧುಪ್ ಘಾಲುಕ್ ಮನುನ್ ಜೆಕರಿಯಾಕ್ ಚಿಟಿಯಾ ಘಾಲುನ್ ಎಚುನ್ ಕಾಡಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:9
10 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.


ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು.


ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.


ಹೀಗೆ ಇವುಗಳನ್ನು ಸಿದ್ಧಮಾಡಿದ ನಂತರ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗದೊಳಗೆ ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು.


ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.


ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.


ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು