Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮ ಊರಿಂದ ನಮ್ಮ ಕಾಲುಗಳಿಗೆ ಹತ್ತಿದ ಧೂಳನ್ನೂ ಒರಸಿಬಿಡುತ್ತೇವೆ; ಅದು ನಿಮಗೇ ಇರಲಿ; ಆದಾಗ್ಯೂ ದೇವರ ರಾಜ್ಯವು ಸಮೀಪಕ್ಕೆ ಬಂದದೆ ಎಂದು ನಿಮಗೆ ತಿಳಿದಿರಲಿ ಎಂಬದಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ‘ನಮ್ಮ ಪಾದಗಳಿಗೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ. ಆದರೂ ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ತುಮ್ಚ್ಯಾ ಗಾಂವಾಂಚ್ಯಾ ವಿರೊದ್ ಅಮ್ಚ್ಯಾ ತಳ್‍ಪಾಯಾಚಿ ಧುಳ್ ಸೈತ್ ಫಾಪಡ್ತಾವ್. ತುಮ್ಕಾ ಯಾದ್ ರಾವ್ನ್ದಿತ್, ದೆವಾಚೆ ರಾಜ್ ತುಮ್ಚ್ಯಾ ಜಗ್ಗೊಳ್ ಯೆಲಾ!” ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:11
16 ತಿಳಿವುಗಳ ಹೋಲಿಕೆ  

ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.


“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.


ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”


ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.


ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು