Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಎಗ್ದಾ ಜೆಜು ಪವಿತ್ರ್ ಆತ್ಮ್ಯಾನ್ ಕುಶಿ ಹೊಲೊ ಅನಿ “ಬಾಬಾ ಸರ್‍ಗಾಚ್ಯಾ ಅನಿ ಹ್ಯಾ ಜಗಾಚ್ಯಾ ಧನಿಯಾ ಮಿಯಾ ತುಕಾ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಬುದ್ವಂತಾನಿಕ್ನಾ ಅನಿ ಶಿಕಲ್ಲ್ಯಾನಿಕ್ನಾ ನಿಪ್ವುನ್ ಥವಲ್ಲೆ, ಶಿಕುನಸಲ್ಲ್ಯಾಕ್ನಿ ತಿಯಾ ದಾಕ್ವುನ್ ದಿಲೆ. ಹೊಯ್ ಮಾಜ್ಯಾ ಬಾಬಾ, ಹೆ, ತುಕಾ ಕಶೆ ಪಾಜೆ ತಸೆಚ್ ಹೊಲೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:21
29 ತಿಳಿವುಗಳ ಹೋಲಿಕೆ  

ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.


ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.


ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.


ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.


ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.


ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.


ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.


ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು