ಲೂಕ 10:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆದರೆ ಮಾರ್ಥಳು ಬಹಳ ಸೇವೆಯ ವಿಷಯವಾಗಿ ಬೇಸತ್ತು ಆತನ ಬಳಿಗೆ ಬಂದು - ಸ್ವಾಮೀ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಅವರ ಬಳಿಗೆ ಬಂದು, “ಕರ್ತದೇವರೇ, ಕೆಲಸ ಮಾಡುವುದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವುದು ನಿಮಗೆ ಚಿಂತೆಯಿಲ್ಲವೋ? ನನಗೆ ಸಹಾಯಮಾಡುವುದಕ್ಕಾಗಿ ಅವಳಿಗೆ ಹೇಳಿರಿ!” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಸಗ್ಳೆ ಕಾಮ್ ಅಪ್ನಿಚ್ ಕರ್‍ತಲೆ ಮನುನ್, ಮಾರ್ಥಾಕ್ ಬೆಜಾರ್ ಹೊಲೊ, ತಸೆ ಮನುನ್ ತಿ ಜೆಜುಕ್ಡೆ ಯೆಲಿ, ಅನಿ “ಗುರುಜಿ, ಸಗ್ಳೆ ಕಾಮ್ ಮಿಯಾಚ್ ಕರುಲಾಲಾ, ಅನಿ ಮಾಜಿ ಭೆನ್ ತುಜ್ಯಾ ಇದ್ರಾಕ್ ಬಸ್ಲಾ, ತಿಕಾ ತಿಯಾ ಕಾಯ್ಬಿ ಸಾಂಗಿನಾ ಹೊಲೆ? ತಿಕಾ ಯೆವ್ನ್ ಮಾಕಾ ಮಜತ್ ಕರ್ ಮನುನ್ ಸಾಂಗ್!” ಮಟ್ಲಿನ್. ಅಧ್ಯಾಯವನ್ನು ನೋಡಿ |