Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಖರೆ, ಮರಿನ್ ಲೈ ಬರೆ ಹೊತ್ತೆ ಎಚುನ್ ಕಾಡ್ಲಿನಾಯ್, ಅನಿ ತೆ ಕೊನಾಕ್ಬಿ ತಿಚೆಕ್ನಾ ಕಾಡುನ್ ಘೆವ್ಕ್ ಹೊಯ್ನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:42
36 ತಿಳಿವುಗಳ ಹೋಲಿಕೆ  

ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.


ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.


ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?


ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.


ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ, ನಿನ್ನ ಕೈ ನನಗೆ ನೆರವಾಗಲಿ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.


ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.


ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು