Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕಾತನು - ನೀವು ಪ್ರಾರ್ಥಿಸುವಾಗ - ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ಅವರಿಗೆ ಹೀಗೆಂದನು: “ನೀವು ಹೀಗೆ ಪ್ರಾರ್ಥಿಸಿರಿ: ‘ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಅವರಿಗೆ, “ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ, ನಿಮ್ಮ ರಾಜ್ಯವು ಬರಲಿ. ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜುನ್ ತೆಂಕಾ “ತುಮಿ ಮಾಗ್ನಿ ಕರ್‍ತಾನಾ ಅಶೆ ಮನಾ, ಬಾಬಾ, ತುಜೆ ಪವಿತ್ರ್ ನಾವ್ ಲೈ ಮರ್‍ಯಾದಿಚೆ ಹೊಂವ್ದಿ; ತುಜೆ ರಾಜ್ ಯೆಂವ್ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:2
45 ತಿಳಿವುಗಳ ಹೋಲಿಕೆ  

ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.


“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.


ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍.


ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ.


ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು, ಶಾಂತಿಯು ಉಂಟಾಗಲಿ.


ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.


ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.


ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.


ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.


ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು