Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರಕೊಂಡು ಬರುವದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತೊ ಗಿರೊ ಪರ್ತುನ್ ಫಾಟಿ ಜಾತಾ, ಅನಿ ಅಪ್ನಾಚ್ಯಾನ್ಕಿ ಬುರ್ಶ್ಯಾ ಸಾತ್ ಗಿರ್‍ಯಾಕ್ನಿ ಘೆವ್ನ್ ಯೆತಾ, ಮಾನಾ ತೆನಿ ಸಗ್ಳೆ ಜಾನಾ, ಥೈ ಯೆವ್ನ್ ರ್‍ಹಾತ್ಯಾತ್. ಅಶೆ ಸಗ್ಳೆ ಹೊವ್ನ್ ಸರಲ್ಲ್ಯಾ ತನ್ನಾ, ತೊ ಮಾನುಸ್ ಅದ್ದಿ ಹೊತ್ತ್ಯಾನ್ಕಿ ಬುರ್ಶ್ಯಾ ಪರಿಸ್ತಿತಿಕ್ ಯೆವ್ನ್ ಪಾವ್ತಾ, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:26
11 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.


ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.


ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,


ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು