Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸುಸ್ವಾಮಿ ಹೀಗೆ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆತನು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - ನಿನ್ನನ್ನು ಹೊತ್ತ ಗರ್ಭವೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೇಸು ಈ ಸಂಗತಿಗಳನ್ನು ಹೇಳಿದಾಗ, ಅಲ್ಲಿ, ಜನರೊಂದಿಗಿದ್ದ ಒಬ್ಬ ಸ್ತ್ರೀ ಯೇಸುವಿಗೆ, “ನಿನ್ನನ್ನು ಹೆತ್ತು ಪೋಷಿಸಿದ ತಾಯಿ ಭಾಗ್ಯವಂತಳೇ ಸರಿ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹೆ ಸಗ್ಳೆ ಜೆಜುನ್ ಸಾಂಗ್ತಲೆ ಆಯ್ಕುನ್, ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲ್ಯಾ ಎಕ್ ಬಾಯ್ಕೊಮನ್ಸಿನ್ “ತುಕಾ ಅಪ್ನಾಚ್ಯಾ ಪೊಟಾತ್ ಥವ್ನ್ ಘೆವ್ನ್ ತುಕಾ ಬಾರಿಕ್ ಮೊಟೆ ಕರಲ್ಲ್ಯಾ ತುಜ್ಯಾ ಬಾಯ್ಚೆ ನಸಿಬ್ ಕವ್ಡೆ ಬರೆ ಅಸಿಲ್!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:27
6 ತಿಳಿವುಗಳ ಹೋಲಿಕೆ  

ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.


ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.


ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,


ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.


ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು