Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನೀವು ಬುದ್ಧಿಹೀನರು! ಹೊರಭಾಗವನ್ನು ಮಾಡಿದಾತನೇ (ದೇವರು) ಒಳಭಾಗವನ್ನೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಮೂರ್ಖರೇ! ಹೊರಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಪಿಶ್ಯಾನೊ! ಭಾಯ್ಲೆ ಕರಲ್ಲ್ಯಾ ದೆವಾನುಚ್, ಭುತ್ತುರ್‍ಲೆಬಿ ಕರಲ್ಲೆ ಹಾಯ್ ಹೊಯ್ ಕಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:40
17 ತಿಳಿವುಗಳ ಹೋಲಿಕೆ  

“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.


ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.


ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು