Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50-51 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50-51 ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50-51 ಹೀಗೆ ಲೋಕಾದಿಯಿಂದ ಹೇಬೆಲನ ರಕ್ತವು ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಹತವಾದ ಜಕರೀಯನ ರಕ್ತದವರೆಗೂ ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಈ ಸಂತತಿಯವರು ಉತ್ತರಕೊಡಬೇಕು ಎಂಬದೇ; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 “ಆದ್ದರಿಂದ ಲೋಕಾದಿಯಿಂದ ಹತರಾದ ಎಲ್ಲಾ ಪ್ರವಾದಿಗಳ ಸಾವಿಗೆ ಈ ಕಾಲದ ಜನರಾದ ನೀವು ದಂಡನೆ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಲೆಕ್ಕ ಕೊಡಬೇಕಾಗಿರುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ತೆಚೆಸಾಟ್ನಿ ಜಗ್ ರಚಲ್ಲ್ಯಾಕ್ನಾ ಆಜ್ ಪತರ್ ಪ್ರವಾದ್ಯಾಕ್ನಿ ಜಿವಾನಿ ಮಾರಲ್ಲ್ಯಾಚಿ ಶಿಕ್ಷಾ ಹ್ಯಾ ಕಾಲಾಚ್ಯಾ ಲೊಕಾಕ್ನಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:50
11 ತಿಳಿವುಗಳ ಹೋಲಿಕೆ  

ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.


ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.


“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು