Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಸ್ನೇಹಿತನು - ನನಗೆ ತೊಂದರೆಕೊಡಬೇಡ; ಈಗ ಕದಾಹಾಕಿ ಅದೆ; ನನ್ನ ಚಿಕ್ಕ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವದಕ್ಕಾಗುವದಿಲ್ಲ ಎಂದು ಒಳಗಿನಿಂದ ಉತ್ತರ ಕೊಟ್ಟರೂ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಒಳಗಿನಿಂದಲೇ ಇವನಿಗೆ ಉತ್ತರವಾಗಿ, ‘ನನ್ನನ್ನು ತೊಂದರೆಪಡಿಸಬೇಡ. ಬಾಗಿಲು ಈಗ ಮುಚ್ಚಿದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆ ಮಲಗಿದ್ದಾರೆ. ನಾನೆದ್ದು ಕೊಡಲಾರೆನು,’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚೊ ದೊಸ್ತ್ ತುಮ್ಕಾ, ಭುತ್ತುರ್‍ನಾಚ್, ಮಾಕಾ ತರಾಸ್ ದಿವ್‍ನಕೊ, “ದಾರಾಕ್ ಅಗ್ಳಿ ಘಾಲುನ್ ಹೊಲಾ, ಮಾಜಿ ಪೊರಾ ಮಾಜ್ಯಾ ಹೊಟ್ಟ್ಯಾತ್ ನಿಜ್ಲ್ಯಾತ್, ಮಿಯಾ ಉಟುನ್ ತುಕಾ ಕಾಯ್ಬಿ ದಿವ್ಕ್ ಹೊಯ್ನಾ” ಮನ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:7
7 ತಿಳಿವುಗಳ ಹೋಲಿಕೆ  

ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು


ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.


ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.


ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.


“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,


ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು,


ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು