Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ಬಾರಿಕ್ಲ್ಯಾ ಹಿಂಡಾ ಭಿಂವ್‍ನಕೊ, ತುಜ್ಯಾ ಬಾಬಾಕ್ ಅಪ್ನಾಚೆ ರಾಜ್ ತುಕಾ ದಿವ್ಕ್ ಬರೆ ದಿಸ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:32
30 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.


ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.


ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.


ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು