Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀವಟಿಗೆಗಳು ಉರಿಯುತ್ತಾ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ನೀವು ವಸ್ತ್ರ ಧರಿಸಿ ಸೇವೆಗೆ ಸಿದ್ಧರಾಗಿರಿ. ನಿಮ್ಮ ದೀಪಗಳು ಉರಿಯುತ್ತಿರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 “ಕಾಯ್ ಯೆತಾ ತೆಕಾ ತಯಾರ್ ರ್‍ಹಾವಾ. ಕಪ್ಡೆ ನೆಸುನ್, ಅನಿ ತುಮ್ಚೆ ದಿವೆ ಪೆಟ್ವುನ್ ಘೆವ್ನ್ ರ್‍ಹಾವಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:35
11 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.


ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು