Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ ಮನುಷ್ಯಕುಮಾರನು ಸಹ ಅವನನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಸಗ್ಳ್ಯಾ ಲೊಕಾಂಚ್ಯಾ ಮದ್ದಿ ತುಮಿ ಮಾಜೆ ಮನುನ್ ಸಾಂಗಟಲ್ಲ್ಯಾನೊ, ಮಿಯಾ ತುಮ್ಕಾ ಗೊಸ್ಟ್ ದಿತಾ, ಮಾನ್ಸಾಚೊ ಲೆಕ್‍ಬಿ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ತುಮಿ ಅಪ್ನಾಚಿ ಲೊಕಾ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:8
13 ತಿಳಿವುಗಳ ಹೋಲಿಕೆ  

ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು