Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ದೇವದೂತರ ಮುಂದೆ ಅವನನ್ನು ನನ್ನವನಲ್ಲವೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಯಾರು ಜನರ ಮುಂದೆ ನನ್ನನ್ನು ಅಲ್ಲಗಳೆಯುವರೋ ಅವರನ್ನು ದೇವದೂತರ ಮುಂದೆ ನಾನು ಅಲ್ಲಗಳೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಜೆ ಕೊನ್ ಲೊಕಾತ್ನಿ ಮಾಜೊ ಮನುನ್ ಘೆಯ್ನಾ, ತೆಂಕಾ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ಮಾನ್ಸಾಚೊ ಲೆಕ್‍ಬಿ ಅಪ್ನಾಚೊ ಮನುನ್ ಘೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:9
15 ತಿಳಿವುಗಳ ಹೋಲಿಕೆ  

ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.


ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.


ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.


ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.


ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.


ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು