Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್‌ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅತ್ತಾ ಹಿತ್ತೆ, ಅಬ್ರಾಹಾಮಾಚ್ಯಾ ಘರಾನ್ಯಾತ್ಲ್ಯಾ ಎಕ್ಲಿಕ್ ಸೈತಾನಾನ್ ಅಟ್ರಾ ವರ್ಸಾಕ್ನಾ ಭಾಂದುನ್ ಥವ್ಲ್ಯಾನಾಯ್, ತಿ ಸಬ್ಬತಾಚ್ಯಾ ದಿಸಿ ಸುಟ್ಕಾ ಹೊವ್‍ ನ್ಹಯ್ ಕಾಯ್?” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:16
11 ತಿಳಿವುಗಳ ಹೋಲಿಕೆ  

“ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.


ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.


ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.


ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು