Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆ ಕಶೆ ಮಟ್ಲ್ಯಾರ್, ಎಕ್ ಮಾನುಸ್ ಎಕ್ ಸಾಸಾವಾಚಿ ಭ್ಹಿಂಯ್ ಘೆತಾ, ಅನಿ ಅಪ್ನಾಚ್ಯಾ ಶೆತಾತ್ ಉಗಾತ್ ಘಾಲ್ತಾ, ತೆ ಝಾಡ್ ಮೊಟೆ ಹೊತಾ, ಅನಿ ಮೊಟೆ ಝಾಡ್ ಹೊತಾ, ಅನಿ ಫಾಂಕ್ರಾ ಯೆವ್ನ್ ತೆಚ್ಯಾ ಟಾಳಿಯಾಕ್ನಿ ಘಂಟೆ ಭಾಂದ್ತ್ಯಾತ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:19
38 ತಿಳಿವುಗಳ ಹೋಲಿಕೆ  

ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.


ಲೋಕದವರೆಲ್ಲರಿಗೂ ಕಾಣಿಸುತ್ತಾ, ಅಂದವಾದ ಎಲೆಗಳನ್ನೂ ಬಹಳ ಹಣ್ಣುಗಳನ್ನೂ ಬಿಡುತ್ತಾ, ಎಲ್ಲಕ್ಕೂ ಆಹಾರವನ್ನು ಒದಗಿಸುತ್ತಾ ತನ್ನ ನೆರಳನ್ನು ಭೂಜಂತುಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡುತ್ತಾ ಕನಸಿನಲ್ಲಿ ನಿನಗೆ ತೋರಿತೋ,


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.


ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.


ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.


ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.


ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು