Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅಬ್ರಹಾಮ ಇಸಾಕ ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕುವದನ್ನೂ ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನು ನೀವು ನೋಡುವಿರಿ. ಆದರೆ ನಿಮ್ಮನ್ನು ಹೊರಗೆ ಹಾಕಲಾಗುವುದು. ಆಗ ನೀವು ಭಯದಿಂದಲೂ ಕೋಪದಿಂದಲೂ ಕೂಗಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅಶೆ ಅಬ್ರಾಹಾಮ್, ಇಸಾಕ್, ಅನಿ ಜಾಕೊಬ್, ಅನಿ ಸಗ್ಳೆ ಪ್ರವಾದಿ ದೆವಾಚ್ಯಾ ರಾಜಾತ್ ರಾವ್ನ್ ತುಮ್ಕಾ ಭಾಯ್ರ್ ಘಾಟಲ್ಲ್ಯಾ ತನ್ನಾ ತುಮಿ ರಡ್ತ್ಯಾಶಿ, ಅನಿ ದಾತಾ ಚಾವ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:28
15 ತಿಳಿವುಗಳ ಹೋಲಿಕೆ  

ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’


ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,


ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,


ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.


ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು