Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಮೇಲೆ ಆತನು ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಒಬ್ಬಾನೊಬ್ಬನು ತನ್ನ ದ್ರಾಕ್ಷೆಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದ್ದನು. ತರುವಾಯ ಅವನು ಅದರಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು, ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬನು ತನ್ನ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದನು. ಒಮ್ಮೆ ಅವನು ಆ ಮರ ಹಣ್ಣು ಫಲಿಸಿರಬಹುದೆಂದು ಅಲ್ಲಿಗೆ ಬಂದನು. ಆದರೆ ಅವನು ಅದರಲ್ಲಿ ಒಂದು ಹಣ್ಣನ್ನೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನಂತರ ಯೇಸು ಈ ಸಾಮ್ಯವನ್ನು ಹೇಳಿದರು: “ಒಬ್ಬ ಮನುಷ್ಯನಿಗೆ ತನ್ನ ದ್ರಾಕ್ಷಿಯ ತೋಟದಲ್ಲಿ ನೆಡಲಾಗಿದ್ದ, ಒಂದು ಅಂಜೂರದ ಮರವಿತ್ತು. ಅವನು ಬಂದು ಅದರಲ್ಲಿ ಫಲವನ್ನು ಹುಡುಕಲು ಒಂದೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಜೆಜುನ್ ತೆಂಕಾ, ಹಿ ಕಾನಿ ಸಾಂಗಟ್ಲ್ಯಾನ್. “ಎಕ್ ಮಾನ್ಸಾಚ್ಯಾ ದ್ರಾಕ್ಷಿಚ್ಯಾ ಮಳ್ಯಾತ್ ಎಕ್ ಅಂಜುರಾಚೆ ಝಾಡ್ ಹೊತ್ತೆ. ತೊ ತ್ಯಾ ಝಾಡಾಕ್ ಅಂಜುರಾಚಿ ಫಳಾ ಹುಡ್ಕುಕ್ ಗೆಲೊ, ತನ್ನಾ ತೆಂಕಾ ಎಕ್‍ಬಿ ಫಳ್ ಗಾವುಕ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:6
14 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


“ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.


ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.


ಅದು, ‘ನಾನು ನನ್ನ ಶ್ರೇಷ್ಠವಾದ ಮಧುರಫಲದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು