Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕಹಾಕುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿಮ್ಮಲ್ಲಿ ಯಾವನಾದರೂ ಒಂದು ಬುರುಜನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕೂತುಕೊಂಡು - ಅದಕ್ಕೆ ಎಷ್ಟು ಖರ್ಚು ಹಿಡಿದೀತು, ಅದನ್ನು ತೀರಿಸುವದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಉಂಟೋ ಎಂದು ಲೆಕ್ಕಮಾಡುವದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 “ತುಮಿ ಕೊನ್ಬಿ ಎಕ್ ಘರ್ ಭಾಂದ್ತಾನಾ, ತೆ ಘರ್ ಭಾಂದುನ್ ಸಾರಿ ಸರ್ಕೆ ಪೈಸೆ ಅಪ್ನಾಕ್ಡೆ ಹಾತ್ ಕಾಯ್ ನಾ,ಮನುನ್ ಅದ್ದಿಚ್ ಯವ್ಜನ್ ಘಾಲಿನ್ಯಾಶಿ ಕಾಯ್”,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:28
12 ತಿಳಿವುಗಳ ಹೋಲಿಕೆ  

ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.


ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು