Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಊಟಕ್ಕೆ ಕರಿಸಿಕೊಂಡವರು ಪಂಙ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅತಿಥಿಗಳಾಗಿ ಬಂದಿದ್ದ ಕೆಲವರು ಊಟಕ್ಕೆ ಕುಳಿತುಕೊಳ್ಳಲು ಉತ್ತಮವಾದ ಸ್ಥಳಗಳನ್ನು ಆರಿಸಿಕೊಳ್ಳುತ್ತಿರುವುದನ್ನು ಕಂಡ ಯೇಸು ಈ ಸಾಮ್ಯವನ್ನು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಉಲ್ಲೆಸೆ ಸೊಯ್ರೆ ಬರೆ ಬರೆ ಜಾಗೆ ಹುಡಕ್ತಲೆ ಜೆಜುನ್ ಬಗಟ್ಲ್ಯಾನ್. ತೆ ಬಗುನ್ ಜೆಜುನ್ ತೆಂಕಾ, ಹಿ ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:7
12 ತಿಳಿವುಗಳ ಹೋಲಿಕೆ  

“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.


ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;


“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.


ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.


“ನರಪುತ್ರನೇ, ನೀನು ಇಸ್ರಾಯೇಲ್ ವಂಶದವರಿಗೆ ಈ ಸಾಮ್ಯವನ್ನು ಒಗಟಾಗಿ ಹೇಳು,


ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.


ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?


ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.


ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು